Ee Sanje Yakagide | Geleya| Jayanth Kaikini | Sonu Nigam
ಆಹಾ ಹ
ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
ಈ ಸಂತೆ ಸಾಕಾಗಿದೆ ನೀನಿಲ್ಲದೆ ಈ ಸಂತೆ ಸಾಕಾಗಿದೆ
ಏಕಾಂತವೇ ಆಲಾಪವು ಏಕಾಂಗಿಯ ಸಲ್ಲಾಪವು
ಈ ಮೌನ ಬಿಸಿಯಾಗಿದೆ ಓ ಈ ಮೌನ ಬಿಸಿಯಾಗಿದೆ
ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
ಲ ಲ
ಈ ನೋವಿಗೆ ಕಿಡಿಸೋಕಿಸಿ ಮಜಾ ನೋಡಿದೆ ತಾರಾಗಣ
ತಂಗಾಳಿಯ ಪಿಸುಮಾತಿಗೆ ಯುಗವಾಗಿದೆ ನನ್ನ ಕ್ಷಣ
ನೆನಪೆಲ್ಲವೂ ಹೂವಾಗಿದೆ ಮೈಯೆಲ್ಲವೂ ಮುಳ್ಳಾಗಿದೆ
ಈ ಜೀವ ಕಾಸಿಯಾಗಿದೆ ಓ ಈ ಜೀವ ಕಾಸಿಯಾಗಿದೆ
ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
ನೀನಿಲದೆ ಆ ಚಂದಿರ ಈ ಕಣ್ಣಲಿ ಕಸವಾಗಿದೆ
ಅದನೋದುವ ಉಸಿರಿಲ್ಲದೆ ಬೆಳದಿಂಗಳು ಅಸುನೀಗಿದೆ
ಆಕಾಶದಿ ಕಲೆಯಾಗಿದೆ ಈ ಸಂಜೆಯಾ ಕೊಲೆಯಾಗಿದೆ
ಈ ಗಾಯ ಹಸಿಯಾಗಿದೆ ಈ ಈ ಗಾಯ ಹಸಿಯಾಗಿದೆ
ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
ಈ ಸಂತೆ ಸಾಕಾಗಿದೆ ನೀನಿಲ್ಲದೆ ಈ ಸಂತೆ ಸಾಕಾಗಿದೆ
ಏಕಾಂತವೇ ಆಲಾಪವು ಏಕಾಂಗಿಯ ಸಲ್ಲಾಪವು
ಈ ಮೌನ ಬಿಸಿಯಾಗಿದೆ ಓ ಈ ಮೌನ ಬಿಸಿಯಾಗಿದೆ
ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
Comments
Post a Comment