Ellilli Nodali Ninnane Kanuve Song Lyrics | Dr. Rajkumar, Lakshmi | Naa Ninna Mareyalare
ಚಿತ್ರ : ನಾ ನಿನ್ನಾ ಮರೆಯಲಾರೆ (1976)
ನಟರು : ಡಾ. ರಾಜಕುಮಾರ್ , ಲಕ್ಷ್ಮೀ
ಸಂಗೀತ : ರಾಜನ್ ನಾಗೇಂದ್ರ
ನಿರ್ದೇಶನ : ದೊರೈ ಭಗವಾನ್
ಗಾಯನ: ಡಾ. ರಾಜಕುಮಾರ್ , ಎಸ್ ಜಾನಕಿ
ರಚನೆ : ಚಿ ಉದಯಶಂಕರ್
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಆ ಕೆಂಪು ತಾವರೆ ಆ ನೀರಿಗಾದರೆ
ಈ ಹೊನ್ನ ತಾವರೆ ನನ್ನಾಸೆಯ ಸೆರೆ (ಆಲಾಪ )
ಮಿಂಚೆಂಬ ಬಳ್ಳಿಗೆ ಮೇಘದ ಆಸರೆ
ಈ ಹೆಣ್ಣ ಬಾಳಿಗೆ ನಿನ್ನ ತೋಳಿನಾಸರೆ
ಓ ಯುಗಗಳು ಜಾರಿ ಉರುಳಿದರೆನು
ನಾನೆ ನೀನು ನೀನೆ ನಾನು ಆದಮೆಲೆ ಬೇರೆ ಏನಿದೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ರವಿಯನ್ನು ಕಾಣದೆ ಹಗಲೆಂದು ಆಗದು
ನಿನ್ನನ್ನು ನೋಡದೆ ಈ ಪ್ರಾಣ ನಿಲ್ಲದು
ಕಡಲನ್ನು ಸೇರದ ನದಿಯೆಲ್ಲಿ ಕಾಣುವೆ
ನಿನ್ನನ್ನು ಸೇರದೆ ನಾ ಹೇಗೆ ಬಾಳುವೆ
ವಿರಹದ ನೋವ ಮರೆಯಲಿ ಜೀವ
ಹೂವು ಗಂಧ ಸೇರಿದಂತೆ ಪ್ರೆಮದಿಂದ ನಿನ್ನ ಸೇರುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ (3)
Comments
Post a Comment